ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.