ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ