ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.