ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.