ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.