ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.