ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.