ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.