ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.