ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.