ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.