ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ