ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.