ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.