ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.