ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.