ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.
ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.
ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.
ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.