1
|
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- |
2
|
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. |
3
|
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. |
4
|
ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. |
5
|
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. |
6
|
ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. |
7
|
ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. |
8
|
ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; |
9
|
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. |
10
|
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. |
11
|
ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. |
12
|
ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. |
13
|
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು. |
14
|
ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು. |
15
|
ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು. |
16
|
ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು. |
17
|
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು. |
Leviticus 1:9 Kannada Language Bible Words basic statistical display
COMING SOON ...