ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.