1
|
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು. |
2
|
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು. |
3
|
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- |
4
|
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? |
5
|
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. |
6
|
ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. |
7
|
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. |
8
|
ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? |
9
|
ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. |
10
|
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. |
11
|
ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು. |
12
|
ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. |
13
|
ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. |
14
|
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. |
15
|
ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ |
16
|
ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. |
17
|
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. |
18
|
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; |
19
|
ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು |
20
|
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. |
21
|
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. |
22
|
ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; |
23
|
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; |
24
|
ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು. |
25
|
ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು. |
26
|
ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು. |
27
|
ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು. |
28
|
ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. |
29
|
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ |
30
|
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. |
31
|
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ. |
32
|
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. |
Luke 15:1 Kannada Language Bible Words basic statistical display
COMING SOON ...