ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.