ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.