1
|
ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು. |
2
|
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ. |
3
|
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ. |
4
|
ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ. |
5
|
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. |
6
|
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. |
7
|
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು. |
8
|
ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. |
9
|
ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. |
10
|
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. |
11
|
ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ. |
12
|
ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು. |
13
|
ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು. |
14
|
ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು. |
15
|
ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ. |
Nahum 1:8 Kannada Language Bible Words basic statistical display
COMING SOON ...