ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.