ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.