ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.