ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.