1
|
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ. |
2
|
ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ. |
3
|
ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ. |
4
|
ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ. |
5
|
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ. |
6
|
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು. |
7
|
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ. |
8
|
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು. |
9
|
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ. |
10
|
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು. |
11
|
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ. |
12
|
ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ. |
13
|
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು. |
14
|
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು. |
15
|
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ. |
16
|
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ. |
17
|
ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ. |
18
|
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು. |
19
|
ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು. |
20
|
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ. |
21
|
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು. |
22
|
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ. |
23
|
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು. |
24
|
ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು. |
25
|
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು. |
26
|
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು. |
27
|
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು. |
28
|
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ. |
Proverbs 28:1 Kannada Language Bible Words basic statistical display
COMING SOON ...