ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.