1
|
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು. |
2
|
ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ. |
3
|
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು. |
4
|
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ. |
5
|
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು. |
6
|
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. |
7
|
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ, |
8
|
ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ. |
9
|
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು |
10
|
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು. |
11
|
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು; |
12
|
ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ |
13
|
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. |
14
|
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ, |
15
|
ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. |
16
|
ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು. |
17
|
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. |
18
|
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ |
19
|
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು. |
20
|
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. |
21
|
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು. |
22
|
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. |
Revelation 3:11 Kannada Language Bible Words basic statistical display
COMING SOON ...