ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.