ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.