ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.