ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ