ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.