ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.