ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.