ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.