ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.