ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?