ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.