ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.