ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.