ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.