ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.