ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.