ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.