ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು
ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.