ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.