ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.